-->
ಮಂಗಳೂರು ಶಸ್ತ್ರಾಸ್ತ್ರ ಪಡೆಯ ಹೆಡ್ ಕಾನ್ಸ್ ಟೇಬಲ್ ಮಾರುತಿ ಲಮಾಣಿ ನಿಧನ

ಮಂಗಳೂರು ಶಸ್ತ್ರಾಸ್ತ್ರ ಪಡೆಯ ಹೆಡ್ ಕಾನ್ಸ್ ಟೇಬಲ್ ಮಾರುತಿ ಲಮಾಣಿ ನಿಧನ


ಮಂಗಳೂರು ನಗರ ಶಸ್ತ್ರಾಸ್ತ ಪಡೆಯ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಾರುತಿ ಲಮಾಣಿ ಅವರು ನಿಧನರಾಗಿದ್ದಾರೆ. 

ಮೂಲತಃ ಹಾವೇರಿ ಮೂಲದವರಾಗಿದ್ದ ಅವರು ಮಂಗಳೂರಿನಲ್ಲಿ ಪೊಲೀಸ್ ಇಲಾಖೆಯಲ್ಲಿ ನಗರ ಶಸ್ತ್ರಾಸ್ತ ಪಡೆಯ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 2 ದಿನಗಳ ಹಿಂದೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು, ಮನೆಯಲ್ಲಿ ಇದ್ದಕಿದ್ದಂತೆ ಅಸ್ವಸ್ಥಗೊಂಡಿದ್ದರು. ತಕ್ಷಣ  ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಧಿಕ ರಕ್ತದೊತ್ತಡದಿಂದಾಗಿ ಮೆದುಳಿನ ರಕ್ತಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದರು. 

ತೀವ್ರ ನೀಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮೃತಪಟ್ಟಿದ್ದಾರೆ. ಅವರು ಇಬ್ಬರು ಮಕ್ಕಳು,ಮಡದಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article