ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ
Saturday, February 21, 2026
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬOಧಿತ ಆರೋಪಿಯನ್ನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ಗುರುತಿಸಲಾಗಿದೆ.
ಬಂಧಿತನನ್ನು ವಿಚಾರಣೆ ನಡೆಸಿದ ಪೊಲೀಸರು ಈತ ಗಾಂಜಾವನ್ನು ಶೇಖರಿಸಿಟ್ಟು ಗಿರಾಕಿಗಳಿಗೆ ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದ, ತಪಾಸಣೆಯ ವೇಳೆ ಆತನ ಬಳಿ 180 ಗ್ರಾಂ ಗಾಂಜಾವನ್ನು ಪತ್ತೆಯಾಗಿರುತ್ತದೆ.
ಮಾದಕವಸ್ತು, ದ್ವಿಚಕ್ರ ವಾಹನ ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.