ಸ್ಕೂಟರ್‌ಗೆ ಸಿಟಿ ಬಸ್ ಡಿಕ್ಕಿ; ಸಹ ಸವಾರೆ ಸಾವು
Thursday, February 05, 2026
ಸ್ಕೂಟರ್ ಗೆ ಸಿಟಿ ಬಸ್‌ವೊಂದು ಡಿಕ್ಕಿ ಹೊಡೆದು ಸಹ ಸವಾರೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ.
ಮೃತರನ್ನು ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಬಸ್ ಮತ್ತು ಸ್ಕೂಟರ್ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಹೋಗುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಬಳಿ ಸ್ಕೂಟರ್ ಗೆ ಬಸ್ ಢಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ಬಸ್ ನಡಿ ಬಿದ್ದಿದೆ. ಈ ವೇಳೆ ಸಹಸವಾರೆಯ ಮೇಲೆಯೆ ಬಸ್ ನ ಟಯರ್ ಹರಿದು ಹೋಗಿದ್ದು, ದೀಪ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
