-->
 ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಅಶೋಕ್ ಪೂಜಾರ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಅಶೋಕ್ ಪೂಜಾರ್ ಆಯ್ಕೆ


ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಅಶೋಕ್ ಪೂಜಾರ್ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್  ಅಧ್ಯಕ್ಷ  ಉದಯ್ ಭಾನು ಚಿಟ್ ರವರ ನಿರ್ದೇಶನದ ಮೇರೆಗೆ ಹಾಗೂ  ಅಖಿಲ ಭಾರತ ಯುವ  ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿಗಳಾದ  ನಿಗಮ್ ಭಂಡಾರಿಯವರ ಅನುಮೋದನೆಯೊಂದಿಗೆ  ಅಶೋಕ ಪೂಜಾರ್ ಅವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರನ್ನಾಗಿ(ಎಸ್.ಸಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಆದೇಶಿಸಲಾಗಿದೆ.

ಯುವ ಜನರ ಸಂಘಟನಾ ಚತುರರಾಗಿರುವ ಅಶೋಕ್ ಪೂಜಾರ್ ಅವರು ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿ, ಮೂಲ್ಕಿ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಆದಿಜಾಂಬವ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಸಮಾಜವನ್ನು ಸಂಘಟಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಪ್ತಶ್ನಾತೀತ ಯುವ ನಾಯಕರಾಗಿ ದುಡಿಯುತ್ತಿದ್ದಾರೆ. ಸಾಮಾಜಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿದ್ದಾರೆ.

ಈ ಬಗ್ಗೆ ಅಶೋಕ್ ಪೂಜಾರ್ ಪ್ರತಿಕ್ರಯಿಸಿ, ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಗೊಳಿಸಲು ಎಲ್ಲ ರೀತಿಯಲ್ಲಿ ಪ್ರಾಮಾಣಿಕನಾಗಿ ದುಡಿಯುತ್ತೇನೆ. ಪಕ್ಷವನ್ನು ಕ್ಷೇತ್ರದ ಸಹಿತ ಜಿಲ್ಲೆಯಲ್ಲಿ ಇನ್ನಷ್ಟು ಬಲಗೊಳಿಸುತ್ತೇನೆ ಎಂದರು. 

Ads on article

Advertise in articles 1

advertising articles 2

Advertise under the article