-->
 ಮೀನು ವ್ಯಾಪಾರಿಯ ಚಿನ್ನದ ಸರ ದರೋಡೆ ಪ್ರಕರಣ; ಆರೋಪಿಯ ಬಂಧನ

ಮೀನು ವ್ಯಾಪಾರಿಯ ಚಿನ್ನದ ಸರ ದರೋಡೆ ಪ್ರಕರಣ; ಆರೋಪಿಯ ಬಂಧನ


ಮೀನು ವ್ಯಾಪಾರಿಗೆ ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದರೋಡೆ ಮಾಡಿದ ಪ್ರಕರಣಕ್ಕೆ ಸಂಬOಧಿಸಿದOತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬOಧಿತನನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಮುತ್ತಣ್ಣ (20) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳ್ಳತನ ಮಾಡಿದ 37.570 ಗ್ರಾಂ ತೂಕದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಬಡಾನಿಡಿಯೂರು ಗ್ರಾಮದ ದಯಾನಂದ ಕುಂದರ್ ಎಂಬವರು ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಶೌಚಾಲಯಕ್ಕೆ ಹೋಗಿ ವಾಪಸ್ಸು ಬಂದು, ಬಂದರು ಕಡೆಗೆ ತೆರಳುತ್ತಿದ್ದಾಗ ಒಬ್ಬ ಆರೋಪಿಯು ಮೀನಿನ ಬಗ್ಗೆ ವಿಚಾರಿಸಿ, ದಯಾನಂದ ಕುಂದರ್ ಅವರ ಮುಖಕ್ಕೆ ಖಾರದ ಪುಡಿ ಎರಚಿದ್ದ. ಮತ್ತಿಬ್ಬರು ಆರೋಪಿಗಳು ಸೇರಿ, ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. 

Ads on article

Advertise in articles 1

advertising articles 2

Advertise under the article