ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರೆ ಆಯ್ಕೆ
Friday, February 20, 2026
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಕಾಪು ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ವಿಜಯವಾಣಿಯ ಹೇಮನಾಥ ಪಡುಬಿದ್ರೆ, ಕೋಶಾಧಿಕಾರಿಯಾಗಿ ಸ್ಪಂದನಾ ಟಿವಿಯ ಸಂತೋಷ್ ನಾಯ್ಕ್, ಕಾರ್ಯದರ್ಶಿಯಾಗಿ ಉದಯವಾಣಿಯ ಸತೀಶ್ಚಂದ್ರ ಶೆಟ್ಟಿ ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ರಾಮಚಂದ್ರ ಆಚಾರ್ಯ, ರಾಕೇಶ್ ಕುಂಜೂರು, ಹರೀಶ್ಚಂದ್ರ ಕಟಪಾಡಿ, ಪ್ರಕಾಶ್ ಸುವರ್ಣ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸುರೇಶ್ ಎರ್ಮಾಳ್, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಆಚಾರ್ಯ, ಪ್ರಮೋದ್ ಸುವರ್ಣ ಉಪಸ್ಥಿತರಿದ್ದರು.