-->
 ಪರ್ಯಾಯ ವೇಳೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಶೀರೂರು ಶ್ರೀಗಳಿಂದ ಅಭಿನಂದನೆ

ಪರ್ಯಾಯ ವೇಳೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಶೀರೂರು ಶ್ರೀಗಳಿಂದ ಅಭಿನಂದನೆ


ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಲ್ಪಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಮಂತ್ರಾಕ್ಷತೆ ನೀಡಿ ಅಭಿನಂದಿಸಿದರು. 

ಪರ್ಯಾಯ ಕಾಲದಲ್ಲಿ ಸಹಕರಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಸರ್ಕಲ್ ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು ಹಾಗೂ ಕರ್ತವ್ಯ ನಿರ್ವಹಿಸಿದ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಶಾಲು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಎಸ್ ಪಿ ಡಾ.ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸುಧಾಕರ್ ನಾಯ್ಕ್ , ಡಿವೈಎಸ್ಪಿ ಪ್ರಭು ಡಿ.ಟಿ, ತಿಮ್ಮಪ್ಪ ಗೌಡ ಹಾಗೂ ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು. 


Ads on article

Advertise in articles 1

advertising articles 2

Advertise under the article