-->
 ಲೈಟ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು

ಲೈಟ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು


ಲೈಟ್ ಕಂಬವೊOದು ಮೈಮೇಲೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳ್ನಾಡು ಮೂಲದ ಮುರುಗನ್ (35) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ದಕ್ಕೆಯಲ್ಲಿ ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಏಕಾಏಕಿ ಬುಡದಿಂದಲೇ ಮುರಿದುಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article