ಅಂಗಳದಲ್ಲಿ ನಿಲ್ಲಿಸಿದ್ದ ಡಿಯೋ ಸ್ಕೂಟರ್ ಏಕಾಏಕಿ ಬೆಂಕಿಗಾಹುತಿ
Wednesday, February 18, 2026
ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಡಿಯೋ ಸ್ಕೂಟರ್ ನಲ್ಲಿ ಏಕಾಎಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ನಡೆದಿದೆ.
ಪಾಲಮೆಯ ನಿವಾಸಿಯೊಬ್ಬರು ಕೇವಲ ಒಂದು ತಿಂಗಳ ಹಿಂದಷ್ಟೇ ಮಂಗಳೂರಿನಲ್ಲಿ ಹೊಸ ಡಿಯೋ ಸ್ಕೂಟರ್ ಖರೀದಿಸಿದ್ದರು. ಮಂಗಳವಾರ ಮಧ್ಯಾಹ್ನ ಸ್ಕೂಟರ್ ಅನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ಜ್ವಾಲೆಗಳು ತೀವ್ರಗೊಂಡ ಪರಿಣಾಮ ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಸ್ಥಳೀಯರು ತಕ್ಷಣವೇ ಅಗ್ನಿ ನಂದಿಸಲು ಪ್ರಯತ್ನಿಸಿದರೂ, ಆಗಾಗಲೇ ಸ್ಕೂಟರ್ ಬಹುತೇಕ ಸುಟ್ಟು ಕರಕಲಾಗಿತ್ತು. ಶಿರ್ವ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.