ಯುವತಿ ನಾಪತ್ತೆ; ದೂರು ದಾಖಲು
Tuesday, February 24, 2026
ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ, ಉಡುಪಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎಂಬ ಯುವತಿ ಫೆ.20ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
5ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಲಂಬಾಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 0820-2526709/2526444, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2572333, ಮೊಬೈಲ್: 9480805431, ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂ: 0820-2551033, ಮೊಬೈಲ್: 9480805449 ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.