ಮದುವೆಯಾಗುವುದಾಗಿ ನಂಬಿಸಿ ವಂಚನೆ; ಆರೋಪಿಯ ಬಂಧನ
Friday, February 06, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬOಧಿತ ಆರೋಪಿಯನ್ನು ಕಬಕ ನಿವಾಸಿ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.