-->
 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ; ಆಸ್ಪತ್ರೆಗೆ ದಾಖಲು


ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.

ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಉಸಿರಾಟದ ತೊಂದರೆ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಅವರು ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ಡಾ. ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿAದ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬAದಿದೆ ಎಂದು ತಿಳಿದು ಬಂದಿದೆ.


Ads on article

Advertise in articles 1

advertising articles 2

Advertise under the article