-->
 ತೆಕ್ಕಟ್ಟೆಯ ಅಂಗಡಿಯಲ್ಲಿ ಬೆಂಕಿ ಅವಘಡ; ಅಪಾರ ಹಾನಿ

ತೆಕ್ಕಟ್ಟೆಯ ಅಂಗಡಿಯಲ್ಲಿ ಬೆಂಕಿ ಅವಘಡ; ಅಪಾರ ಹಾನಿ


ಕುಂದಾಪುರದ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ ನಲ್ಲಿ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. 


ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿOದ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಎಂದಿನOತೆ ಅಂಗಡಿ ಮಾಲೀಕ ಫಣಿರಾಜ್ ಹತ್ವಾರ್ ಕೊರವಡಿ ಅವರು ರಾತ್ರಿ ಅಂಗಡಿ ಮುಚ್ಚಿ ಮನೆಗೆ ತೆರಳಿದ ನಂತರ ಈ ಘಟನೆ ಸಂಭವಿಸಿದೆ. 

ಅಗ್ನಿ ಅವಘಡದಲ್ಲಿ ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು, ಸ್ಟೇಷನರಿ ಸಾಮಗ್ರಿಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಟೇಬಲ್ ಸೇರಿದಂತೆ ವಿವಿಧ ಪರಿಕರಗಳು ಸುಟ್ಟು ಭಸ್ಮವಾಗಿವೆ. ಘಟನೆಯಿಂದ ಅಂದಾಜು ಸುಮಾರು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಯುವಕರ ತಂಡ ತುರ್ತಾಗಿ ಆಗಮಿಸಿ ಬೆಂಕಿ ನಂದಿಸಲು ಶ್ರಮಿಸಿದ್ದು, ಬಳಿಕ ಕುಂದಾಪುರ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ.






 

Ads on article

Advertise in articles 1

advertising articles 2

Advertise under the article