ಕೊಲ್ಲೂರಿನಲ್ಲಿ ನೂತನ ಸೌಪರ್ಣಿಕಾ ಅತಿಥಿಗೃಹ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
Saturday, February 07, 2026
ವರ್ಷದಿಂದ ವರ್ಷಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಖಾಸಗಿ ಲಾಡ್ಜ್ ಗಳಲ್ಲಿ ದುಬಾರಿ ದರ ಕೊಟ್ಟು ಭಕ್ತರು ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಸರಕಾರಿ ವಸತಿಗೃಹಗಳಿದ್ದರೂ ವಿಶೇಷ ಸಂದರ್ಭಗಳಲ್ಲಿ ಭಕ್ತರಿಗೆ ವಾಸ್ತವ್ಯಕ್ಕೆ ಅವು ಸಾಲುತ್ತಿರಲಿಲ್ಲ. ಹೆಚ್ಚುವರಿ ವಸತಿಗೃಹದ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನೂತನ ಸೌಪರ್ಣಿಕಾ ಅತಿಥಿಗೃಹ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ತೋರಿಸಿದೆ. ಈಕಾಮಗಾರಿಯನ್ನು ₹16 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ ಬರುವ ಲಕ್ಷಾಂತರ ಭಕ್ತರಿಗೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ.