ಕುಕ್ಕುಂದೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ 'ಕಿಸಾನ್ ಸಭಾ' ಉದ್ಘಾಟನೆ
Wednesday, February 25, 2026
ಕುಕ್ಕುಂದೂರು ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 165 ಭರವಸೆಯಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ 590 ಭರವಸೆಗಳನ್ನು ನೀಡಿದ್ದು, ಅದರಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಹಾಗಾಗಿ ಎಲ್ಲಾ ಭರವಸೆ, ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದರು. ಜಾತ್ಯಾತೀತ, ಧರ್ಮಾತೀತವಾಗಿ ಎಲ್ಲಾ ಅರ್ಹ ಬಡವರಿಗೆ ಸರ್ಕಾರ ಮಟ್ಟದ ಸವಲತ್ತುಗಳನ್ನು ನೀಡುವುದಾಗಿ ಭರವಸೆ ನೀಡಿದರು. ಗೃಹಲಕ್ಷ್ಮೀ ಯೋಜನೆಯ ಮೂಲಕ 1ಕೋಟಿಯ 24 ಲಕ್ಷ ಮಹಿಳೆಯರಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿಯನ್ನು ಕೊಡುತ್ತಿದ್ದೇವೆ. ಗೃಹ ಜ್ಯೋತಿ ಯೋಜನೆಯಲ್ಲಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದ್ದು, ರಾಜ್ಯಸರ್ಕಾರ 5 ಕೆಜಿ ಹೆಚ್ಚುವರಿ ಅಕ್ಕಿಯ ಹಣವನ್ನು ಫಲಾನುಭವಿಗಳಿಗೆ ನೀಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಅವರು ನಿಗಮದ ವತಿಯಿಂದ ಮುಖ್ಯಮಂತ್ರಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಈ ವೇಳೆ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಎಂ.ಸಿ ಆಚಾರ್, ಮೂಖ್ಯೋಪಾದ್ಯಾಯರಾದ ಸಂಜೀವ ಪೂಜಾರಿ, ಅಧ್ಯಾಪಕಿ ನಿರ್ಮಲಾವತಿ, ಕಟ್ಟಡದ ವಾಸ್ತು ವಿನ್ಯಾಸಗಾರರರಾದ ಉಡುಪಿ ನಿರ್ಮೀತಿ ಕೇಂದ್ರದ ಪವನ್, ನರಸಿಂಹ ಪೈ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಸಿ. ಮಹಾದೇವಪ್ಪ, ವಿ. ಸುನಿಲ್ ಕುಮಾರ್, ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ? ಎಂ. ಎನ್. ರಾಜೇಂದ್ರ ಕುಮಾರ್ , ಕಾಂಗ್ರೆಸ್ ನಾಯಕ ಮುನಿಯಾಲು ಉದಯ್‌ಶೆಟ್ಟಿ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ, ಕಿಸಾನ್ ಸಭಾ ಟ್ರಸ್ಟ್ ಅಧ್ಯಕ್ಷ ಹರ್ಷ ಮೊಯ್ಲಿ ಮೊದಲಾದವರು ಉಪಸ್ಥಿತರಿದ್ದರು.
