ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
Wednesday, February 25, 2026
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ, ಅಲ್ಲಿಂದ ಹೆಲಿಪ್ಯಾಡ್ ಮೂಲಕ ಕಾರ್ಕಳಕ್ಕೆ ಪ್ರಯಾಣ ಬೆಳೆಸಿದರು.
11.30ರ ಸುಮಾರಿಗೆ ಕಾರ್ಕಳದ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಸಿಎಂ ಸಿದ್ದರಾಮಯಹ್ಯ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು. ಪೊಲೀಸರಿಂದ ವಿಶೇಷ ಗೌರವ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಸಿಎಂ ಗೆ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದರು. ಉಡುಪಿ ಜಿಲ್ಲಾಧಿಕಾರಿ ಸ್ವರೂಪ, ಐಜಿಪಿ ಅಮಿತ್ ಸಿಂಗ್, ಎಸ್ಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.
.jpeg)
.jpeg)
.jpeg)
.jpeg)
.jpeg)
