-->
ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗಮಹೋತ್ಸವ ಗೌರವ

ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗಮಹೋತ್ಸವ ಗೌರವ


ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆ.1ರಿಂದ 6ರವರೆಗೆ ನಡೆದ  'ಭಾರತ ರಂಗ ಮಹೋತ್ಸವ -2026 ಹಾಗೂ ರಂಗ ಪರಿಷೆ ' ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗಮಹೋತ್ಸವ ಗೌರವ ನೀಡಲಾಯಿತು. 

ಸಮಾಜ ಸೇವೆ, ಯಕ್ಷಗಾನ, ಜಾನಪದ, ಧಾರ್ಮಿಕ ಮೊದಲಾದ ರಂಗಗಳಲ್ಲಿ ನೀಡಿದ ಅನುಪಮ ಸೇವೆಯನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ. ವಿ ನಾಗರಾಜ ಮೂರ್ತಿ, ಕಲಾವಿದರಾದ ಸಿಹಿಕಹಿ ಚಂದ್ರು, ಸಿಹಿಕಹಿ ಗೀತಾ, ಚಲನಚಿತ್ರ ನಿರ್ದೇಶಕ ಕೆ.ಶಿವರುದ್ರಯ್ಯ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸಂಚಾಲಕರಾದ ರವೀಂದ್ರ ನಾಥ್ ಸಿರಿವರ, ಡಾ. ಟಿ. ಎಚ್. ಲವ ಕುಮಾರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಶಿವನಾಯಕ ದೊರೆ, ಕರ್ನಾಟಕ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ, ಚಾಂದ್‌ಪಾಷಾ, ಭಾರತ ರಂಗ ಮಹೋತ್ಸವದ ಸಂಚಾಲಕಿ ಡಾ. ವೀಣಾ ಶರ್ಮ ಭೂಸನೂರಮಠ ಮೊದಲಾದ ಗಣ್ಯರು ಉಪಸ್ಥಿತರಿದ್ದರು. 


Ads on article

Advertise in articles 1

advertising articles 2

Advertise under the article