ಅಕ್ರಮ ಸ್ಫೋಟಕ ಬಳಸಿ ಬಂಡೆಕಲ್ಲು ಸ್ಪೋಟ ಪ್ರಕರಣ; ಇಬ್ಬರ ಬಂಧನ
Thursday, February 05, 2026
ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕುಕ್ಕುಂದೂರು ನಿವಾಸಿ ರವಿಚಂದ್ರ ಹಾಗೂ ಆತನ ಮಗ ಪವನ್ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಫೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 13/2026 ಕಲಂ.9(B)1(b), Explosive Act 1884, ಕಲಂ. 5 Explosive Substance Act 1908, ಕಲಂ. 287, ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಾಗಿತ್ತು.
ತನಿಖೆಯನ್ನು ಕೈಗೊಂಡ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.