-->
 ಹಂಪಿಗೆ ಪ್ರವಾಸಕ್ಕೆ ತೆರಳಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ

ಹಂಪಿಗೆ ಪ್ರವಾಸಕ್ಕೆ ತೆರಳಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ


ಕೇರಳದಿಂದ ಹಂಪಿಗೆ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. 

ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ads on article

Advertise in articles 1

advertising articles 2

Advertise under the article