ಶಾಲಾ ಮಕ್ಕಳ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಮಕ್ಕಳಿಗೆ ಸಣ್ಣಪುಟ್ಟ ಗಾಯ
Tuesday, February 24, 2026
ಬೈಂದೂರಿನ ಹಳ್ಳಿಹೊಳೆ ಗ್ರಾಮದ ಸುಳಗೋಡು ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್ಸೊಂದು ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಿಂದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.