ಚಲಿಸುತ್ತಿದ್ದ ರೈಲಿನಿಂದ ಎಸೆಯಲ್ಪಟ್ಟು ಪುತ್ತೂರಿನ ಯುವಕ ಸಾವು
Wednesday, February 11, 2026
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಉದ್ಯೋಗಿಯಾಗಿದ್ದ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.
ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿAದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.