-->
 ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಆರೋಪಿಯ ಬಂಧನ

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಆರೋಪಿಯ ಬಂಧನ


ಉಡುಪಿ ಜಿಲ್ಲೆ ಕೋಟ ಸಮೀಪದ ಪ್ಯಾರಡೈಸ್ ಹೋಟೆಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಕೋಟ ಪೊಲೀಸ್ ಠಾಣಾ ಸಿಬ್ಬಂದಿಗಳು ಬಂಧಿಸಿದ್ದಾರೆ. ಮನಿತ್ (26) ಬಂಧಿತ ಆರೋಪಿ.

ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ, ವರ್ಲ್ಡ್ ಕಪ್ ಟಿ-20 ಪಂದ್ಯಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರನ್ನು ಒಟ್ಟುಗೂಡಿಸಿಕೊಂಡು ಹಣ ಸಂಗ್ರಹಿಸಲಾಗುತ್ತಿತ್ತು. ಮೊಬೈಲ್ ಫೋನ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ದಾಳಿ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಸಾರ್ವಜನಿಕರು ಸ್ಥಳದಿಂದ ಪರಾರಿಯಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಲಾಗುತ್ತಿದ್ದ ಐಫೋನ್ ಮೊಬೈಲ್ ಹಾಗೂ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಯು ಇತರರೊಂದಿಗೆ ಓಮನ್ ಹಾಗೂ ಜಿಂಬಾಂಬೈ ನಡುವಿನ ಪಂದ್ಯಾಟದ ಬಗ್ಗೆ ಆನ್‌ಲೈನ್ ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದನು ಎಂಬುದು ತನಿಖೆ ಮೂಲಕ ಬೆಳಕಿಗೆ ಬಂದಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿ ಮನಿತ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


 




Ads on article

Advertise in articles 1

advertising articles 2

Advertise under the article