ಹಿರಿಯಡ್ಕ ಸರ್ಕಾರಿ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ
Saturday, February 28, 2026
ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಿರಿಯಡ್ಕ ನಿವಾಸಿ ನಯನಾ ಶೆಟ್ಟಿ ಎಂಬವರ ಏಕೈಕ ಪುತ್ರಿ ಸುವೀಕ್ಷಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಫೆ. 26 ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ ಮನೆಯವರು ನೇಣು ಕುಣಿಕೆಯಿಂದ ಕೆಳಗಿಳಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ಸುವೀಕ್ಷಾ ಶೆಟ್ಟಿ ನಿಧನರಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.