-->
ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ


ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕ ಚಂದ್ರು ಲಮಾಣಿ ಮತ್ತು ಇಬ್ಬರು ಪಿಎಗಳೂ ʻಲೋಕಾʼ ಬಲೆಗೆ ಬಿದ್ದಿದ್ದಾರೆ. ಬಳಿಕ ಕಂತೆ ಕಂತೆ ಹಣದ ಸಮೇತ ಶಾಸಕ ಚಂದ್ರು ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ, ಹಾಗೂ ಖಾಸಗಿ ಪಿಎ ಗುರುನಾಯ್ಕ್ ಮೂವರನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 

ಕಾಮಗಾರಿಗೆ ಶಾಸಕರು ಕ್ಲಾಸ್‌-1 ಗುತ್ತಿಗೆದಾರ ವಿಜಯ ಪೂಜಾರ ಎನ್ನುವವರ ಬಳಿ 11 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಇದರ ಮೊದಲ ಹಂತದ ಹಣವಾಗಿ 5 ಲಕ್ಷ ರೂ. ಪಡೆಯುವಾಗಲೇ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕರು ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ನಿರಂತರ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ಇದೀಗ ಅವರ ಪಕ್ಷದ ಶಾಸಕರೇ ಲೋಕಾ ಬಲೆಗೆ ಬಿದ್ದಿರುವುದು ತೀವ್ರ ಮುಜುಗರ ಉಂಟು ಮಾಡಿದೆ.

Ads on article

Advertise in articles 1

advertising articles 2

Advertise under the article