-->
 ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ


ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನೆಲ್‌ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

 ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಾಕಾರಿಯಾಗದೇ ನಿಧನರಾಗಿದ್ದಾರೆ. ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ ನಗರಗಳಲ್ಲಿ ಖಾಸಗಿ ಉಪಗ್ರಹ ಚಾನೆಲ್‌ಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನುಲವರು ನಿರ್ವಹಿಸಿದ್ದರು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. 

Ads on article

Advertise in articles 1

advertising articles 2

Advertise under the article