ಬೆಳ್ತಂಗಡಿ ಯುವತಿ ನಾಪತ್ತೆ; ದೂರು ದಾಖಲು
Thursday, February 05, 2026
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನಿಡಲಾಗಿದೆ.
ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನOತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖ ವನ್ನು ಹೊಂದಿರುತ್ತಾಳೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾಳೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆOದು ಠಾಣಾಧಿಕಾರಿ ಸುತೇಶ್ ಎಸ್. ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.