-->
ಮಾದಕ ವಸ್ತುವಿನೊಂದಿಗೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯ ಬಂಧನ

ಮಾದಕ ವಸ್ತುವಿನೊಂದಿಗೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯ ಬಂಧನ


ಉಪ್ಪಿನಂಗಡಿಯ ಪಂಜಳ ಪ್ರದೇಶದಲ್ಲಿ ಎಂ.ಡಿ.ಎಂ.ಎ. ಮಾದಕ ವಸ್ತುವಿನೊಂದಿಗೆ ಅನುಮಾನಾಸ್ಪದವಾಗಿ  ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ (ಫೆ.10) ಸಂಜೆ 6 ಗಂಟೆ ಸುಮಾರಿಗೆ ಹಗಲು ರೌಂಡ್ಸ್ ನಡೆಸುತ್ತಿದ್ದ ಪೊಲೀಸರು ಯಹ್ಯಾ ಕೊಕ್ಕಡ (48) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆತ ಮಾರಾಟದ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. 

ಮಹಜರಿನ ವೇಳೆ 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ₹3,000), ಒಂದು ಐಫೋನ್ (₹45,000) ಹಾಗೂ ಒಂದು ಸ್ಯಾಮ್ಸಂಗ್ ಕೀಪ್ಯಾಡ್ ಮೊಬೈಲ್ (₹1,000) ಸೇರಿ ಒಟ್ಟು ₹49,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ.19/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 22(ಬಿ) ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article