ಕೀಳಂಜೆ ಶ್ರೀ ಮಹಾವಿಷ್ಣು, ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪೇಜಾವರ ಶ್ರೀ ಭೇಟಿ
Thursday, February 12, 2026
ಕೀಳಂಜೆ ಶ್ರೀ ಮಹಾವಿಷ್ಣು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಇಂದು ದೇವಳಕ್ಕೆ ಭೇಟಿ ನೀಡಿದರು.
ದೇವರ ದರ್ಶನ ಪಡೆದ ಪೇಜಾವರ ಶ್ರೀಗಳು ನವೀಕರಣ ಕಾಮಗಾರಿಗಳನ್ನು ಪರಿಶೀಲಿಸಿದರು. ಅಲ್ಲದೇ ನೂತನ ಕೆರೆ ನಿರ್ಮಾಣವನ್ನು ಪ್ರಶಂಶಿಸಿದರು. ಈ ಸಂದರ್ಭದಲ್ಲಿ ದೇವಳದ ಅರ್ಚಕರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.