-->
 ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ

ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ


ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊರ್ವರು ತನ್ನತೋಟದಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾನಾಡಿನಲ್ಲಿ ನಡೆದಿದೆ.

ಪಡುಮಾನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಿರುಮಲಬೆಟ್ಟು ನಿವಾಸಿ,ಅಗೋಟಿ ಯಾನೆ ರಮೇಶ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಮೇಸ್ತ್ರಿ ಕೆಲಸ ಮಾಡುತ್ತಿದ್ದ ರಮೇಶ್ ಅವರು ಆರ್ಥಿಕ ಸಂಕಷ್ಟದಿAದ ಮನನೊಂದಿದ್ದರು ಎನ್ನಲಾಗಿದೆ. ಮೃತರಿಗೆ ಪತ್ನಿ ಹಾಗೂ ಎರಡುವರೆ ವರ್ಷದ ಪುತ್ರಿ ಇದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article