-->
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ; ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ; ಆರೋಪಿಯ ಬಂಧನ


ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರಿನ ಮತ್ತಿಕೆರೆ ನಿವಾಸಿ ಪ್ರಕಾಶ್ ಎಸ್.(45) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯವಾಗಿ ಕಮೆಂಟ್ ಮಾಡಿರುವ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 31/2025 ಕಲಂ  353(2) BNS ಮತ್ತು 66(ಸಿ) IT Act  ರಂತೆ ಸ್ವಯಂ ಪ್ರೇರಿತ  ಪ್ರಕರಣ ದಾಖಲಾಗಿರುತ್ತದೆ.  

ಕುಂದಾಪುರ ಉಪವಿಭಾಗದ ಪೋಲೀಸ್ ಉಪಾಧೀಕ್ಷಕ ಹೆಚ್‌ ಡಿ ಕುಲಕರ್ಣಿ ಇವರ ಮಾರ್ಗದರ್ಶನದಲ್ಲಿ ಕುಂದಾಪುರ ಪೊಲೀಸ್‌ ಠಾಣಾ ನಿರೀಕ್ಷಕ ಜಯರಾಮ್‌ ಡಿ ಗೌಡ ನೇತೃತ್ವದಲ್ಲಿ ಕುಂದಾಪುರ ಠಾಣಾ ಪಿ.ಎಸ್‌.ಐ ನಂಜಾನಾಯ್ಕ್‌ ಎನ್‌ (ಕಾ&ಸು), ಪಿ.ಎಸ್‌.ಐ  ಪುಷ್ಪ (ತನಿಖೆ) ಹಾಗೂ ಸಿಬ್ಬಂದಿಗಳಾದ ಸಂತೋಷ, ಮೋಹನ್‌, ಸಂತೋಷ ದೇವಾಡಿಗ, ಘನಶ್ಯಾಮ, ಅಣ್ಣಪ್ಪ, ಮಹಾಬಲ ಶೆಟ್ಟಿಗಾರ, ನಾಗಶ್ರೀ, ಗೌತಮ ಇವರ ತಂಡ ಪ್ರಕರಣದ ಆರೋಪಿ ಪ್ರಕಾಶ್‌ ನನ್ನು ದಸ್ತಗಿರಿ ಮಾಡಿ ನಂತರ ಆರೋಪಿತನನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

Ads on article

Advertise in articles 1

advertising articles 2

Advertise under the article