-->
 ಶಾಲೆಗಳು, ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ: ಕೇಂದ್ರ ಸರಕಾರ ಆದೇಶ

ಶಾಲೆಗಳು, ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ: ಕೇಂದ್ರ ಸರಕಾರ ಆದೇಶ


ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.

ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲೆಗಳಲ್ಲಿ ರಾಷ್ಟ್ರಗೀತೆಗೂ ಮೊದಲು ‘ವಂದೇ ಮಾತರಂ’ನ 6 ಚರಣಗಳನ್ನು ಹಾಡಬೇಕು. ಹಾಗೆಯೇ ಗೀತೆಯನ್ನು ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

2025ರ ಡಿಸೆಂಬರ್‌ನಲ್ಲಿ ‘ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ನೂತನ ಆದೇಶದ ಪ್ರಕಾರ ಪದ್ಮ ಪ್ರಶಸ್ತಿಗಳು ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಹಾಗೂ ರಾಷ್ಟ್ರಪತಿಗಳು ಭಾಗವಹಿಸುವ ಎಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ಶಾಲಾ ಸಭೆಗಳಲ್ಲಿ ವಂದೇ ಮಾತರಂ ನುಡಿಸುವುದು ಕಡ್ಡಾಯವಾಗಿದೆ.

Ads on article

Advertise in articles 1

advertising articles 2

Advertise under the article