-->
ಕರ್ಣಾಟಕ ಬ್ಯಾಂಕ್ ವತಿಯಿಂದ ಉಚಿತ ರಕ್ತದಾನ, ವೈದ್ಯಕೀಯ ತಪಾಸಣಾ ಶಿಬಿರ

ಕರ್ಣಾಟಕ ಬ್ಯಾಂಕ್ ವತಿಯಿಂದ ಉಚಿತ ರಕ್ತದಾನ, ವೈದ್ಯಕೀಯ ತಪಾಸಣಾ ಶಿಬಿರ


ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ  ಜಿಲ್ಲಾ ಆಸ್ಪತ್ರೆ  ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ  ಕರ್ನಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ಯಲ್ಲಿ ಆಯೋಜಿಸಲಾಗಿತ್ತು. 

ಈ ಶಿಬಿರದಲ್ಲಿ ಉಚಿತ ಮಧುಮೇಹ ಪರೀಕ್ಷೆ ರಕ್ತದೊತ್ತಡ ಪರೀಕ್ಷೆ, ದಂತ ತಪಾಸಣೆ, ECG ಪರೀಕ್ಷೆ ,HB ಪರೀಕ್ಷೆ ,Blood group ಪರೀಕ್ಷೆ ಹಾಗೂ ರಕ್ತ ದಾನವನ್ನು ಸಹ ಹಮ್ಮಿಕೊಳ್ಳಲಾಗಿತ್ತು . ಈ ಶಿಬಿರದಲ್ಲಿ ಕರ್ನಾಟಕ ಬ್ಯಾಂಕಿನ ಎಲ್ಲಾ ಗ್ರಾಹಕರು, ಸಾರ್ವಜನಿಕರು ಹಾಗೂ ಬ್ಯಾಂಕಿನ ನೌಕರರು ಈ ಉಚಿತ ತಪಾಸಣೆಯ ಸೌಲಭ್ಯವನ್ನು  ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಕರ್ನಾಟಕ ಬ್ಯಾಂಕಿನ ನಿದರ್ಶಕರಾದ ಬಾಲಕೃಷ್ಣ ಹಲಸೆ , ಈ ರಕ್ತ ದಾನದಲ್ಲಿ  ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕಿನೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು.


ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ರಾದ ಡಾ.ಹೆಚ್ ಅಶೋಕ್ ಮಾತನಾಡಿ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.

ಗಾಂಧಿ ಆಸ್ಪತ್ರೆಯ ಮಖ್ಯಸ್ತರಾದ ಡಾ.ಹರೀಶ್ ಚಂದ್ರ ಮಾತನಾಡಿ, ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ  ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಬೇಕು ಆ ಮೂಲಕ  ಜನರಲ್ಲಿ ಅರಿವು ಮೂಡಿಸಬೇಕು ಎಂದರು.  ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿ ಇದರ ಸಹಾಯಕ ಮಹಾ ಪ್ರಬಂಧಕ ಮತ್ತು ವಲಯ ಮಖ್ಯಸ್ತರಾದ ರಮೇಶ್ ವೈದ್ಯ  ಇವರು, ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯವಿದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮವಾದ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು. ರಕ್ತದಾನ ವಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣರಾಗುತ್ತೇವೆ ಎಂದು ಹೇಳಿದರು ಮತ್ತು ಈ ಕರ್ನಾಟಕ ಬ್ಯಾಂಕ್ ಎರಡು ವರ್ಷದಿಂದ ರಕ್ತ ದಾನ ಮತ್ತು ಆರೋಗ್ಯ ಶಿಬಿರವನ್ನು ಆಯೋಜಿಸಿತ್ತ ಬಂದಿದೆ ಮುಂದಿನ ದಿನಗಳಲ್ಲಿ ಈತಂಹ ಹಲಾವರು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು. 

ಈ ಕಾರ್ಯಕ್ರಮದಲ್ಲಿ  ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿಕೇಂದ್ರದ ಮುಖ್ಯಸ್ಥರಾದ ಡಾ.ವೀಣಾ ಕುಮಾರಿ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿದರ್ಶಕರಾದ ಡಾ.ವ್ಯಾಸರಾಜ ತಂತ್ರಿ ಹಾಗು ಕರ್ನಾಟಕ ಬ್ಯಾಂಕಿನ ಎಲ್ಲ ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಸುಮಾರು  50 ಜನರು  ರಕ್ತದಾನ‌ ಮಾಡಿದರು.

Ads on article

Advertise in articles 1

advertising articles 2

Advertise under the article