-->
ಮಹಿಳೆ ನಾಪತ್ತೆ; ಬೈಂದೂರು ಠಾಣೆಯಲ್ಲಿ ದೂರು ದಾಖಲು

ಮಹಿಳೆ ನಾಪತ್ತೆ; ಬೈಂದೂರು ಠಾಣೆಯಲ್ಲಿ ದೂರು ದಾಖಲು


ಉಡುಪಿ ಜಿಲ್ಲೆಯ ಬೈಂದೂರು ತಾಲೂ್ಕಿನ ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಠಾಣೆಯಲ್ಲಿ ದೂರು ದಾಖಲಾಗಿದೆ. 

ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು್ ಈವರೆಗೆ ಮನೆಗೂ ಅಥವಾ ಸಂಬಂಧಿಕರ ಮನೆಗೂ ವಾಪಾಸಾಗದೇ ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದ ಮಹಿಳೆ 5 ಅಡಿ 3 ಇಂಚು ಎತ್ತರ, ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08254-251033, ಮೊಬೈಲ್ ಸಂಖ್ಯೆ 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 08254-251031, ಮೊಬೈಲ್ ಸಂಖ್ಯೆ 9480805434 ಅಥವಾ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2526444 ಅನ್ನು ಸಂಪರ್ಕಿಸುವಂತೆ ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article