ಮಾಜಿ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾದ ವೀರಪ್ಪ ಮೊಯ್ಲಿ
Monday, February 02, 2026
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಬಂಟ್ವಾಳದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದರು.
ಭಾನುವಾರ ಅಪರಾಹ್ನ ಮೊಯ್ಲಿ ಅವರು ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿ ಜನಪ್ರಿಯರಾಗಿದ್ದ ಜನಾರ್ದನ ಪೂಜಾರಿ ಅವರು ಹಿಂದಿನ ರಾಜಕೀಯ ಸನ್ನಿವೇಶವನ್ನು ಮೆಲುಕು ಹಾಕಿ ಉಭಯಕುಶಲೋಪರಿ ನಡೆಸಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಮಂಗಳೂರಿನ ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಭಾಸ್ಕರ ಕೆ, ಮಂಗಳೂರಿನ ಮಾಜಿ ಕಾರ್ಪೊರೇಟರ್ ಅಶೋಕ್ ಡಿ.ಕೆ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ರಿಸರ್ವ್ ಬ್ಯಾಂಕ್ ಮಾಜಿ ನಿರ್ದೇಶಕ ನವೀನ್ ಭಂಡಾರಿ ಉಪಸ್ಥಿತರಿದ್ದರು.