ದ್ವೇಷ ಭಾಷಣ ಪ್ರಕರಣ: ಆರೋಪಿಗಳಿಬ್ಬರಿಗೆ ಜಾಮೀನು ಮಂಜೂರು
Tuesday, February 03, 2026
ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹುಟ್ಟಿಸುವ ವೀಡಿಯೋ ಹಂಚಿಕೊಂಡ ಪ್ರಕರಣದಲ್ಲಿ ಬಂಧಿತರಾಗಿರುವ ಸಂತೋಷ್ ಶೆಟ್ಟಿ ಹಾಗೂ ಕೋಟೇಶ್ವರ ಕೆ. ನಾಗರಾಜ ಎಂಬವರಿಗೆ ನ್ಯಾಯಾಲಯವು ಜಾಮೀನು ನೀಡಿದೆ.
ಬ್ರಹ್ಮಾವರದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ಪ್ರಥಮ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹುಟ್ಟಿಸುವ ವೀಡಿಯೊವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ BNS ಕಾಯ್ದೆಯ ಸೆಕ್ಷನ್‌ಗಳು 196(1), 353(2) ಮತ್ತು 299 ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಒಂದನೇ ಆರೋಪಿಯ ಪರವಾಗಿ ಕುಂದಾಪುರದ ನ್ಯಾಯವಾದಿ ಬನ್ನಾಡಿ ಸೋಮನಾಥ ಹೆಗ್ಡೆ, ಎರಡನೇ ಆರೋಪಿಯ ಪರವಾಗಿ ಕುಂದಾಪುರದ ನ್ಯಾಯವಾದಿ ಕಾಳಾವರ ಉದಯ್ ಶೆಟ್ಟಿ ವಾದ ಮಂಡಿಸಿದ್ದರು.