ಹೆಜಮಾಡಿ ಟೋಲ್ ಗೇಟ್ ಬಳಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ..! (Video)
Wednesday, February 04, 2026
ಕೇರಳದಿಂದ ಉಡುಪಿಗೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.
ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಯುವಕರ ಹುಚ್ಚಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ.