ಉಡುಪಿ ಜಿಲ್ಲಾ ಅಬಕಾರಿ ಡಿ.ಸಿ ಮನೆ ಸೇರಿ 15ಕಡೆ ಲೋಕಾಯುಕ್ತ ದಾಳಿ
Friday, March 13, 2026
ಉಡುಪಿ ಜಿಲ್ಲಾ ಅಬಕಾರಿ ಡಿಸಿ , ಶ್ರೀನಿವಾಸ್ ಟಿಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಸುಮಾರು ಎಂಟು ಕೋಟಿಯ 69 ಲಕ್ಷ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಡಿಸಿ ಶ್ರೀನಿವಾಸ್ ಅವರಿಗೆ ಸೇರಿದ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಈ ವೇಳೆ 11 ನಿವೇಶನಗಳು ಆರು ವಾಸದ ಮನೆಗಳು ಹಾಗೂ 31 ಎಕರೆ ಜಮೀನು ಸೇರಿದಂತೆ 6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ
