15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Tuesday, March 24, 2026
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬAಧಿಸಿ ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪಡುತೋನ್ಸೆ ಗ್ರಾಮದ ಕೊಂಡಿಬೇOಗ್ರೆ ನಿವಾಸಿ ಜುಬೇರ್(42) ಬಂಧಿತ ಆರೋಪಿ. ಈತ 18 ವರ್ಷಗಳ ಹಿಂದೆ ಕೆಮ್ಮಣ್ಣು ಗಣಪತಿ ವ್ಯವಸಾಯ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಪ್ರಕರಣದ ಆರೋಪಿಯಾಗಿದ್ದ. ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಮಲ್ಪೆ ಪೊಲೀಸ್ ಠಾಣಾ ಎಸ್ಸೈ ಅನೀಲ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಭಾಸ್ಕರ್, ಕುಬೇರ ಮಾ.22ರಂದು ಬೆಂಗಳೂರಿನ ಶಿವಾಜಿನಗರ ಎಂಬಲ್ಲಿ ಬಂಧಿಸಿದ್ದಾರೆ.
ಮಾ.23ರಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.