17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Wednesday, March 25, 2026
ಮಂಗಳೂರಿನ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ 2009ರಲ್ಲಿ ಕಾಪಿರೈಟ್ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬOಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕಿನ ದೇರಳಕಟ್ಟೆಯ ನಾಟೆಕಲ್ ನಿವಾಸಿ ರಿಯಾಜ್ ಬಂಧಿತ ಆರೋಪಿ. ಕಳೆದ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.