-->
 ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ; ಮೀನುಗಾರಿಕೆಗೆ ಪ್ರೋತ್ಸಾಹ

ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ; ಮೀನುಗಾರಿಕೆಗೆ ಪ್ರೋತ್ಸಾಹ


ಸಿಎಂ ಸಿದ್ದರಾಮಯ್ಯ  ಅವರು ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಮೀನುಗಾರರಿಗೆ ನೀಡುವ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ ದರ 10 ಸಾವಿರದಿಂದ 20 ಸಾವಿರಕ್ಕೆ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆ ನಿರ್ಮಾಣ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸö್ಯ ದರ್ಶಿನಿಗಳ ಸ್ಥಾಪನೆ, ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ, ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಕ್ಸಲೆನ್ಸ್ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.


Ads on article

Advertise in articles 1

advertising articles 2

Advertise under the article