ಕರಾವಳಿಯಲ್ಲಿ ಮಾ.28ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
Wednesday, March 25, 2026
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ಗಾಳಿಯ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಕರಾವಳಿ ಭಾಗದಲ್ಲಿ ಮಾರ್ಚ್ 28 ರವರೆಗೆ ಗುಡುಗು ಮಿಂಚಿನೊOದಿಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿಗ್ರಿ ಸೆಲ್ಸಿಯಸ್ ಇಳಿಕೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಮಾರ್ಚ್ 24 ರವರೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ವಿಪರೀತ ಒಣಹವೆ ಮತ್ತು ಗರಿಷ್ಠ ತಾಪಮಾನ ಏರಿಕೆಯಿಂದಾಗಿ ಉಷ್ಣ ಅಲೆಯ ಎಚ್ಚರಿಕೆಯನ್ನೂ ನೀಡಲಾಗಿತ್ತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಈ ಅವಧಿಯಲ್ಲಿ ಪ್ರತಿ ಗಂಟೆಗೆ 30-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.