3 ಕೋಟಿ ವೆಚ್ಚದಲ್ಲಿ ಮಣಿಪಾಲ ಕೈಗಾರಿಕಾ ಪ್ರದೇಶ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ
Saturday, March 14, 2026
ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಗೊಳ್ಳಲಿರುವ ಮುಖ್ಯ ರಸ್ತೆ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಮಣಿಪಾಲ ಕೈಗಾರಿಕಾ ಪ್ರದೇಶದ ರಸ್ತೆ ಸಂಪೂರ್ಣ ಹದಗೆಟ್ಟು ಈ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಿಗೆ ಹಾಗೂ ದಿನಂಪ್ರತಿ ಸಂಚರಿಸುವ ಸಾರ್ವಜನಿಕರಿಗೆ ತೀವ್ರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆಯ ಮೂಲಕ 40 ಲಕ್ಷ ಅನುದಾನ ಒದಗಿಸಿ, ಸ್ಥಳೀಯ ಕಂಪೆನಿಗಳ ಸಿಎಸ್‌ಆರ್ ಅನುದಾನದ ಮೂಲಕ ಒಟ್ಟು 3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗಿದೆ. ಸರಕಾರದ ಮೂಲಕ ರಸ್ತೆ ಅಭಿವೃದ್ಧಿಗೆ ಅನುದಾನದ ಕೊರತೆ ಉಂಟಾದಾಗ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಶಾಸಕನ ನೆಲೆಯಲ್ಲಿ ಸ್ಥಳೀಯ ಖಾಸಗಿ ಕಂಪೆನಿಗಳಿಗೆ ಮನವಿ ಮಾಡಿದಾಗ ಈ ಕಾಮಗಾರಿಗೆ ತಮ್ಮ ಸಿಎಸ್‌ಆರ್ ನಿಧಿಯಿಂದ ಗರಿಷ್ಠ ಮೊತ್ತವನ್ನು ನೀಡುವ ಮೂಲಕ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿಗೆ ಕೈಜೋಡಿಸಿ ವಿಶೇಷ ಸಹಕಾರ ನೀಡಿದ್ದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಜಿಲ್ಲಾ ಸಣ್ಣ ಕೈಗಾರಿಕೆ ಸಂಘದ ಅಧ್ಯಕ್ಷರಾದ ಮಟ್ಟಾರು ವಸಂತ ಕಿಣಿ ಮಾತನಾಡಿ ಕೈಗಾರಿಕಾ ಪ್ರದೇಶದ ಬಹುದಿನದ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ರವರಿಗೆ ಅಭಿನಂದನೆ ಸಲ್ಲಿಸಿ ಕಾಮಗಾರಿ ಶೀಘ್ರ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿಗುವಂತಾಗಲಿ ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸದಸ್ಯರಾದ ಕಲ್ಪನಾ ಸುಧಾಮ,ನರಸಿಂಹ ನಾಯಕ್, ಟಿ ಜಿ ಹೆಗ್ಡೆ, ಹರೀಶ್ ಶೆಟ್ಟಿ, ಜಿಲ್ಲಾ ಸಣ್ಣಾ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳಾದ ವಿಶ್ವನಾಥ ಭಟ್, ಚಿತ್ರರಂಜನ್ ಭಟ್, ವಲ್ಲಭ್ ಭಟ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಮುಖರಾದ ಕೃಷ್ಣ ಕುಲಾಲ್, ಸದಾನಂದ ಪ್ರಭು, ನಿತಿನ್ ಪೈ, ಪೃಥ್ವಿರಾಜ್ ಹಾಗೂ ವಿವಿಧ ಕಂಪೆನಿಗಳ ಪ್ರಮುಖರು ಉಪಸ್ಥಿತರಿದ್ದರು.
