-->
 ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ಬಾರಿಗೆ ಗಡಿಪಾರು ಆದೇಶ

ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ಬಾರಿಗೆ ಗಡಿಪಾರು ಆದೇಶ


ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ.

ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡುವುದಕ್ಕಾಗಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೋಮವಾರ ಮಧ್ಯರಾತ್ರಿಯೇ ತೆರಳಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯ ಮನೆಯ ಗೋಡೆಗೆ ನೋಟಿಸ್ ಅಂಟಿಸಿರುವುದಾಗಿ ತಿಳಿದು ಬಂದಿದೆ. 

Ads on article

Advertise in articles 1

advertising articles 2

Advertise under the article