ಪಡಿತರ ಚೀಟಿ ತಿದ್ದುಪಡಿಗೆ ಮಾ. 31ರವರೆಗೆ ಗಡುವು
Saturday, March 07, 2026
ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಕಾಯುತ್ತಿರುವ ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗುಡ್ ನ್ಯೂಸ್ ನೀಡಿದ್ದು, 2026ನೇ ಸಾಲಿನ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಆನ್‌ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 31ರ ವರೆಗೂ ಅವಕಾಶ ಕಲ್ಪಿಸಲಾಗಿದೆ.ಹೊಸ ಸದಸ್ಯರ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಹಾಗೂ ಮೊಬೈಲ್ ಸಂಖ್ಯೆ ಜೋಡಣೆ, ಹೆಸರು ತೆಗೆದುಹಾಕುವುದು, ಕುಟುಂಬದ ಮುಖ್ಯಸ್ಥರ ಬದಲಾವಣೆ, ಫೋಟೋ ಬದಲಾವಣೆ, ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣಪತ್ರ 6 ವರ್ಷ ಮೆಲ್ಪಟ್ಟವರಿಗೆ, ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ)
ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು: ಆಧಾರ್ ಕಾರ್ಡ್, ಮದುವೆ ಪ್ರಮಾಣ ಪತ್ರ, ಪೋಷಕರ ಪಡಿತರ ಚೀಟಿ.
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು: ಮಗುವಿನ ಜನನ ಪ್ರಮಾಣಪತ್ರ, ಪೋಷಕರ ಆಧಾರ್ ಕಾರ್ಡ್.
ರೇಷನ್ ಕಾರ್ಡ್ ತಿದ್ದುಪಡಿಯನ್ನು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇರಿದಂತೆ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಇಲ್ಲಿ ಹೊಸ ರೇಷನ್ ಕಾರ್ಡ್ಗೂ ಸಹ ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಇದಕ್ಕೆ ಇನ್ನೂ ಅವಕಾಶ ಕಲ್ಪಿಸಲಾಗಿಲ್ಲ.