ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ; ಓರ್ವ ಸಾವು, 9 ಮಂದಿ ಗಂಭೀರ
Saturday, March 21, 2026
ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು (ಮಾ. 21) ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ವೈಫಲ್ಯದಿಂದಾಗಿ ಟಿಟಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಟಿಟಿ ವಾಹನಲ್ಲಿದ್ದ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಎಂಬವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕಿಶೋರ್ ಪಿ. ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.