ಪ್ರೇಮ ವೈಫಲ್ಯ; ಉಳ್ಳಾಲದ ಯುವಕ ವಿದೇಶದಲ್ಲಿ ಆತ್ಮಹತ್ಯೆ
Tuesday, March 03, 2026
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ನಿವಾಸಿ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಅವರು ಕಳೆದ ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು ಮರಳಿ ಒಮಾನ್ ಗೆ ಹಿಂತಿರುಗಿದ್ದರು.
ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಉರ್ವಾದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಹಿನ್ನೆಲೆಯಲ್ಲಿ ಪುನೀತ್ ಮನನೊಂದಿದ್ದರು ಎನ್ನಲಾಗಿದೆ.
ಈ ವಿಷಯವನ್ನು ತಮ್ಮ ಗೆಳೆಯರ ಬಳಿಯೂ ಅವರು ಹಂಚಿಕೊAಡಿದ್ದರು. ಪ್ರೀತಿ ದೂರವಾದ ನೋವಿನಲ್ಲಿ ಪುನೀತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.