-->
ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ: ತಾಯಿ–ಮಗಳು ದಾರುಣ ಸಾವು

ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ: ತಾಯಿ–ಮಗಳು ದಾರುಣ ಸಾವು


ಬೈಂದೂರು ತಾಲೂಕಿನ ನಾವುಂದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಎರ್ಟಿಗಾ ಕಾರು ಡಿಕ್ಕಿ ಹೊಡೆದು ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ.


ಮೃತರನ್ನು ಮಮತಾ (36) ಹಾಗೂ ಅವರ ಮಗಳು ಧೃತಿಕಾ (14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಾಘು (40), ಜಾಹ್ನವಿ (12), ಚಾರ್ವಿ (10) ಮತ್ತು ಕಿರಣ್ ಗಂಭೀರವಾಗಿ ಗಾಯಗೊಂಡಿದ್ದಾರೆ.


ಗಾಯಾಳುಗಳಾದ ರಾಘು, ಜಾಹ್ನವಿ ಹಾಗೂ ಚಾರ್ವಿ ಅವರಿಗೆ ಕುಂದಾಪುರದ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೋರ್ವ ಗಾಯಾಳು ಕಿರಣ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಬೆಂಗಳೂರಿನ ಮೂಲದ ಈ ಕುಟುಂಬವು ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಗೋಕರ್ಣ ಹಾಗೂ ಮುರುಡೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article