ಸಮಾಧಾನ ಮಹೋತ್ಸವ ವಿರೋಧಿಸಿ ಧರಣಿ; ಹಿಂಜಾವೇ ಕಾರ್ಯಕರ್ತರು ಪೊಲೀಸ್ ವಶ
Friday, March 20, 2026
ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌOಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿಯ ಗೋವಿಂದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಬಳಿಕ ಮಿಷನ್ ಕಂಪೌOಡ್ ಬಳಿಯ ಮೈದಾನದ ಕಡೆಗೆ ತೆರಳಲು ಅನುವಾಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮಣಿಪಾಲ ಠಾಣೆಗೆ ಕರೆದೊಯ್ದು ಬಿಡುಗಡೆ ಮಾಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ನಗರ ಠಾಣೆಯ ಪ್ರಭಾರ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.