ಜಾಲತಾಣದಲ್ಲಿ ಪ್ರಚೋದನಾಕಾರಿ ವಿಡಿಯೋ ಹಂಚಿಕೆ; ಆರೋಪಿಯ ಬಂಧನ
Wednesday, March 25, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ವಿಡಿಯೋ ಹಂಚಿದ ಆರೋಪದಲ್ಲಿ ಓರ್ವ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಬOಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಬಂಧಿತ ಆರೋಪಿ. 2025ರ ಅಕ್ಟೋಬರ್ ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಖಾತೆಯಿಂದ ಎಐ ತಂತ್ರಜ್ಞಾನದ ಮೂಲಕ ತಿರುಚಿದ ವಿಡಿಯೋವನ್ನು ಹಂಚಿ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕಲು ಪ್ರಚೋದನೆ ನೀಡಲಾಗಿದೆ ಎಂಬ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಕಲಂ 196, 353(1), 351(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ತನಿಖೆಯ ವೇಳೆ “ನಝೀರ ಮಂಗಳೂರು” ಖಾತೆಯ ಮಾಹಿತಿ ಪಡೆದು ಪರಿಶೀಲಿಸಿದಾಗ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂಬಾತನೇ ಆ ಖಾತೆಯಿಂದ ವಿಡಿಯೋ ಹಂಚಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಮಾರ್ಚ್ 22 ರಂದು ಬೆಂಗಳೂರಿನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.