-->
ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳ ಬಂಧನ

ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳ ಬಂಧನ


ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 8 ಲಕ್ಷ 42 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ನಿಸಾರ್ ಅಲಿಯಾಸ್ ನಿಸಾರುದ್ದೀನ್ (28) ಹಾಗೂ ಮೊಹಮ್ಮದ್ ಜಮಾಲುದ್ದೀನ್ ಜಮಾಲ್ (24) ಬಂಧಿತ ಆರೋಪಿಗಳು. ಮಾ. 18ರಂದು ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಫಾರ್ಚೂನರ್ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ತಿಳಿದ ಎ.ಸಿ.ಪಿ ಶ್ರೀಕಾಂತ್ ಹಾಗೂ ಪಿ.ಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಜಪೆ ಠಾಣೆಯ ಪಿ.ಎಸ್.ಐ ಲತಾ ಮತ್ತು ಸಿಬ್ಬಂದಿಗಳಾದ ರಾಜೇಶ್, ಚಿದಾನಂದ, ಪ್ರಕಾಶ್ ಅವರು ದಾಳಿ ನಡೆಸಿದರು. ದಾಳಿ ವೇಳೆ 4 ದನಗಳನ್ನು ತುಂಬಿಕೊಂಡಿದ್ದ ಫಾರ್ಚೂನರ್ ಕಾರು, ಒಂದು ತಲವಾರ್ ಹಾಗೂ ಒಂದು ಕಬ್ಬಿಣದ ರಾಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯ ವೇಳೆ ಆರೋಪಿಗಳು ಕಾರು ಹಾಗೂ ಸೊತ್ತುಗಳನ್ನು ಬಿಟ್ಟು ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 63/2026 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಕಲಂ 4, 5, 12, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 11(A), 11(D), ಮೋಟಾರು ವಾಹನ ಕಾಯ್ದೆ 1988ರ ಕಲಂ 192(A) ಹಾಗೂ ಆಯುಧ ಕಾಯ್ದೆ 1959ರ ಕಲಂ 4, 25(1B) ಅಡಿಯಲ್ಲಿ  ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article